ಕರಾವಳಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಡುಪಿ ನಗರಸಭೆಯ ಮ್ಯಾನೇಜರ್ ನಿಧನ

Pinterest LinkedIn Tumblr

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ನ.22ರ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಅಕಸ್ಮಾತ್ ರಸ್ತೆಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ವೆಂಕಟರಮಣ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ವೆಂಕಟರಮಣ ಅವರ ನಿಧನಕ್ಕೆ ಸಿಎಂಸಿ ಅಧ್ಯಕ್ಷರು, ಸದಸ್ಯರು, ಶಾಸಕ ರಘುಪತಿ ಭಟ್ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

 

Comments are closed.