ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಹಿರಿಯ ಸಹೋದರ ಸೋಮಭಾಯಿ ಮೋದಿ ಭೇಟಿ ನೀಡಿದರು.

ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಯ ದರ್ಶನವನ್ನು ಪಡೆದರು. ವರ್ಷದ ಹಿಂದೆ ಮೋದಿ ಜೀಯವರ ಇನ್ನೋರ್ವ ಸಹೋದರ ಕೂಡ ದೇವಿಯ ದರ್ಶನ ಪಡೆದಿದ್ದರು.
ಈ ಸಂದರ್ಭದಲ್ಲಿ ದೇವಳದ ಆಡಳಿತ ಅಧಿಕಾರಿ ಮಹೇಶ್, ದೇವಳದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ರತ್ನಾ ರಮೇಶ್ ಕುಂದರ್, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ಕೊಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಭಟ್, ಖ್ಯಾತ ನೇತ್ರ ತಜ್ಞ ಡಾ. ಕೃಷ್ಣಪ್ರಸಾದ್, ಮೋಹನ್ ಗೌಡ, ವಿಶ್ವಹಿಂದೂ ಪರಿಷತ್ ಪ್ರಮುಖರಾದ ಜಗದೀಶ್ ಹಾಗೂ ದೇವಳದ ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Comments are closed.