ಸುರತ್ಕಲ್: ನಿಂತಿದ್ದ ಗೂಡ್ಸ್ ರೈಲಿನ ಮೇಲ್ಭಾಗ ಹತ್ತಿ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್’ನಿಂದ ಭಾಗಶಃ ಸುಟ್ಟು ಕರಕಲಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣದ ಸಮೀಪದ ಅಗರಮೇಲುನಲ್ಲಿ ಮಂಗಳವಾರ ಸಂಜೆ ನಡೆದಿದೆ.

(ಸಾಂದರ್ಭಿಕ ಚಿತ್ರ)
ಸಲಾನ್ ಪಾರಸ್ (21) ವಿದ್ಯುತ್ ಅವಘಡದಿಂದ ಗಾಯಗೊಂಡ ಯುವಕ.
ಸುರತ್ಕಲ್ ಕೊಂಕಣ ರೈಲ್ವೇ ನಿಲ್ದಾಣ ವಿದ್ಯುತ್ತೀಕರಣಗೊಂಡಿದ್ದು ಇದಕ್ಕಾಗಿ ಹೈವೋಲ್ಟೇಜ್ ತಂತಿಗಳನ್ನು ಆಳವಡಿಸಲಾಗಿದೆ. ಅಪಾಯದ ಎಚ್ಚರಿಕೆ ಬೋರ್ಡ್ ಕೂಡ ಅಳವಡಿಸಲಾಗಿತ್ತು. ನಿಂತಿದ್ದ ಗೂಡ್ಸ್ ರೈಲಿನ ಮೇಲೇರಿ ಸೆಲ್ಫಿ ತೆಗೆಯಲು ತೆರಳಿದ್ದ ಸಲಾನ್ ಹೈವೋಲ್ಟೇಜ್ ತಂತಿಗಳನ್ನು ಗಮನಿಸದೇ ಇದ್ದುದ್ದರಿಂದ ವಿದ್ಯುತ್ ಶಾಕ್ ಹೊಡೆದು ಭಾಗಶಃ ಸುಟ್ಟು ಹೋಗಿದ್ದಾನೆ. ಸದ್ಯ ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Comments are closed.