ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು (ನ.27 ಶನಿವಾರ) ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಈ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಸಚಿವರಾದ ಆರ್.ಅಶೋಕ್, ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.