ಮಂಗಳೂರು: ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ರತ್ನಾಕರ್’ಗೆ ಜಾಮೀನು ಮಂಜೂರಾಗಿದೆ.

ಮಂಗಳೂರಿನ 3ನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಆರೋಪಿ ಡಾ. ರತ್ನಾಕರನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟಿಗೆ ಹಾಜರುಪಡಿಸಿ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
ಇದೀಗಾ ಆರೋಪಿಗೆ ಜಾಮೀನು ಸಿಕ್ಕಿದೆ.
Comments are closed.