ಉಡುಪಿ: ಜೊಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಎಂಬಲ್ಲಿ 101 ವರ್ಷದ ವೃದ್ದೆಯೊಬ್ಬರು ತಮ್ಮ ಮನೆಗೆ ಭೇಟಿ ನೀಡಿದ ಆರೋಗ್ಯ ಕಾರ್ಯಕರ್ತರಿಂದ ಸ್ವಯಂ ಪ್ರೇರಿತರಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ.

ಇಲ್ಲಿನ ನಕ್ರೆ ರತಿ ಪೂಜಾರ್ತಿ (101) ಎನ್ನುವರು ಮೊದಲ ಡೋಸ್ ಪಡೆದಿದ್ದಾರೆ. ಇವರಿಗೆ ಆರೋಗ್ಯ ಇಲಾಖೆಯ ಕುಮುದಾವತಿ, ಅನಿತಾ, ಆಶಾಕಾರ್ಯಕರ್ತೆ ಸುಮಾ ವ್ಯಾಕ್ಸಿನ್ ನೀಡಿದರು.

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮೆಚ್ಚುಗೆ ವ್ಯಕ್ತಪಡಿಸಿದ್ದು ”ಕಾರ್ಕಳ ತಾಲೂಕು ಕುಕ್ಕುಂದೂರು ನಲ್ಲಿ ಇಂದು 101 ವರ್ಷದ ವೃದ್ದೆಯೊಬ್ಬರೂ ತಮ್ಮ ಮನೆಗೆ ಭೇಟಿ ನೀಡಿದ ಆರೋಗ್ಯ ಕಾರ್ಯಕರ್ತರಿಂದ ಸ್ವಯಂ ಪ್ರೇರಿತರಾಗಿ ಕೋವಿಡ್ ನಿರೋಧಕ ಲಸಿಕೆ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೇ ರೀತಿ ಶೀಘ್ರದಲ್ಲಿ ಜಿಲ್ಲೆಯಲ್ಲಿ 100% ಲಸಿಕೆ ಗುರಿ ಸಾಧಿಸುವ ಸಲುವಾಗಿ , ಜಿಲ್ಲೆಯ ಪ್ರತಿಯೊಬ್ಬ ನಾಗರೀಕರು ಸ್ವಯಂ ಪ್ರೇರಿತರಾಗಿ ಎರಡು ಡೋಸ್ ಲಸಿಕೆ ಪಡೆಯುವುದರ ಮೂಲಕ ಜಿಲ್ಲೆಯನ್ನು ಕೋವಿಡ್19 ಮುಕ್ತವಾಗಿಸುವಂತೆ ಕೋರಿದೆ” ಎಂದು ಡಿಸಿ ಉಡುಪಿ ಫೇಸ್‌ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
Comments are closed.