ಮನೋರಂಜನೆ

ದಾಂಪತ್ಯ ಜೀವನಕ್ಕೆ‌ ಕಾಲಿಟ್ಟ ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್

Pinterest LinkedIn Tumblr

ಮುಂಬೈ: ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಬರ್ವಾರ ಕೋಟೆಯ ಸಿಕ್ಸ್ ಸೆನ್ಸ್ ಅರಮನೆಯಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಸೆಮಣೆ ಏರಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಡಿಸೆಂಬರ್ 7 ರಂದು ಮೆಹಂದಿ ಕಾರ್ಯಕ್ರಮದೊಂದಿಗೆ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಿದ್ದವು. ತದನಂತರ ಡಿಸೆಂಬರ್ 9 ರಂದು ಪಂಜಾಬಿ ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಬೀರ್ ಖಾನ್, ಗುರುದಾಸ್ ಮನ್, ವಿಜಯ್ ಕೃಷ್ಣ ಆಚಾರ್ಯ ಸೇರಿದಂತೆ ಹಲವು ಬಾಲಿವುಡ್ ನಟ, ನಟಿಯರು ಹಾಗೂ ಗಣ್ಯರು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತಿಳಿದುಬಂದಿದೆ.

Comments are closed.