ಕರಾವಳಿ

ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ನುಗ್ಗಿ ಸಹಪಾಠಿಯಿಂದಲೇ ಅತ್ಯಾಚಾರ: ಕಾಮುಕನನ್ನು ಬಂಧಿಸಿದ ಬಜ್ಪೆ ಪೊಲೀಸರು

Pinterest LinkedIn Tumblr

ಮಂಗಳೂರು: ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ.

ಘಟನೆ ವಿವರ:
ಸಂತ್ರಸ್ತ ಯುವತಿ ಹಾಗೂ ಅಬೂಬಕರ್ ಸಿದ್ದಿಕ್ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿ ತೆಗೆದುಕೊಂಡ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ. ಆದರೆ ಆಕೆ ಪ್ರೀತಿಸಲು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡು ಬಜ್ಪೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Comments are closed.