ಕರಾವಳಿ

ಮಂಗಳೂರು-ಉಡುಪಿ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕನೊಂದಿಗಿದ್ದ ಯುವತಿ; ಜೋಡಿಗೆ ಗದರಿಸಿದ ಇಬ್ಬರು ವಶಕ್ಕೆ

Pinterest LinkedIn Tumblr

ಮಂಗಳೂರು: ಮಂಗಳೂರು-ಉಡುಪಿ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ 5-6 ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಘಟನೆ ಡಿ.10ರಂದು ನಡೆದಿದೆ ಎನ್ನಲಾಗಿದ್ದು ಯುವಕ, ಯುವತಿಗೆ ಗದರಿಸಿದ ವಿಡಿಯೋ ವೈರಲ್ ಆಗಿತ್ತು.

ಮಂಗಳೂರು ಹೊರವಲಯದ ಕಾಲೇಜೊಂದರ ಉಡುಪಿ ಮೂಲದ ವಿದ್ಯಾರ್ಥಿನಿ ಮತ್ತು ಶಿವಮೊಗ್ಗ ಮೂಲದ ಅನ್ಯಕೋಮಿನ ವಿದ್ಯಾರ್ಥಿ ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದು ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಆಕ್ಷೇಪಿಸಿ ಸಾರ್ವಜನಿಕರು ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Comments are closed.