ಕರಾವಳಿ

ಬಿಪಿನ್ ರಾವತ್ ಸಾವಿನ ವಿಚಾರದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದವರ ವಿರುದ್ಧ ಮಂಗಳೂರು‌ ಪೊಲೀಸರಿಂದ ತನಿಖೆ

Pinterest LinkedIn Tumblr

ಮಂಗಳೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುವ ಮೂಲಕ ಸಂಭ್ರಮಿಸಿರುವ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ದ ತನಿಖೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಯಾರ ಬಂಧನವಾಗಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಆಕ್ಷೇಪಾರ್ಹ ರೀತಿಯ ಕಾಮೆಂಟ್‌‌ಗಳನ್ನು ಮೂರು ಖಾತೆಗಳಲ್ಲಿ ಹಾಕಿರುವುದು ತಿಳಿದು ಬಂದಿದ್ದು, ಇದು ನಕಲಿ ಖಾತೆಯ ಹಾಗೂ ಯಾಕೆ ಈ ರೀತಿಯ ಕಾಮೆಂಟ್‌‌ಗಳನ್ನು ಹಾಕುತ್ತಿದ್ದಾರೆ ಎಂಬುದನ್ನು ನಾವು ತನಿಖೆ ಮಾಡುತ್ತೇವೆ ಎಂದರು. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505(1ಎ), 505(2) ಮತ್ತು 505(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಂಬರ್ 8ರಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌‌, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದರು.

Comments are closed.