ಆರೋಗ್ಯ

ರಾಜ್ಯದಲ್ಲಿ ಮೂರನೇ ಓಮಿಕ್ರಾನ್ ಪ್ರಕರಣ ಪತ್ತೆ- ಸಚಿವ ಡಾ. ಸುಧಾಕರ್

Pinterest LinkedIn Tumblr

ಬೆಂಗಳೂರು: ಕರ್ನಾಟಕದಲ್ಲಿ ಮೂರನೇ ಓಮಿಕ್ರಾನ್ ಪ್ರಕರಣ ಭಾನುವಾರ ದೃಢಪಟ್ಟಿದ್ದು, ಈ ಬಗ್ಗೆ ಖುದ್ದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗೆ ನಿರೀಕ್ಷಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

 

Comments are closed.