ಉಡುಪಿ: ತ್ರಾಸಿ ರಾಷ್ಟ್ರೀಯ ಹೆದ್ದಾರಿಯ ಸಮೀಪ ವೇಗದಲ್ಲಿ ಬಂದ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿ ರಸ್ತೆಯಲ್ಲಿ ಬಿದ್ದಿದ್ದ ಗೋವಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲಾಗಿದೆ.

ಅಪಘಾತ ಗಮನಿಸಿದ ಸ್ಥಳೀಯ ನೈಟ್ ಕ್ಯಾಂಟೀನವರು ರಸ್ತೆಯಲ್ಲಿ ಬಿದ್ದು ನರಳುತ್ತಿರುವ ಗೋವನ್ನು ರಸ್ತೆ ಬದಿಯಲ್ಲಿ ತಂದು ಮಲಗಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಕರೆ ಮಾಡಿ ತಿಳಿಸಿದ್ದಾರೆ. ಹಿಂಜಾವೇ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಗಂಗೊಳ್ಳಿಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಹೊಂದಿರುವ ಹಿರಿಯ ಸಹಾಯಕ ವೈದ್ಯ ರಾಘವೇಂದ್ರ ಶೆಟ್ಟಿಯವರಿಗೆ ಕರೆ ಮಾಡಿದ್ದು ಅವರು ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಆಗಮಿಸಿ ಗೋವಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ತಡರಾತ್ರಿ 2-30ರ ಸುಮಾರಿಗೆ ಕರೆ ಸ್ವೀಕರಿಸಿ ಕೂಡಲೇ ಸ್ಥಳಕ್ಕೆ ಆಗಮಿಸಿ ಗೋವಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಹಿಂಜಾವೇ ಕಾರ್ಯಕರ್ತರು ಕೃತಜ್ಞತೆ ಸಲ್ಲಿಸಿದ್ದಾರೆ.
Comments are closed.