ಬೆಳಗಾವಿ: ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ರಮೇಶ್ ಕುಮಾರ್ ಹಿಂದೇಟು ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದಿದ್ದಾರೆ.
ಕಳೆದ ವಾರ ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ಮಾತನಾಡುವಾಗ ಅತ್ಯಾಚಾರದ ಕುರಿತಾದ ಹೇಳಿಕೆಯೊಂದನ್ನು ನೀಡಿದ್ದರು. ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂಬರ್ಥದಲ್ಲಿ ಮಾತನಾಡಿದ್ದು ವಿವಾದ ಸೃಷ್ಟಿಸಿತ್ತು. ಇತ್ತ ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್ ಕುಮಾರ್ ಟ್ವೀಟ್ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಅಲ್ಲದೆ ಸದನಸದಲ್ಲಿಯೂ ಎಲ್ಲರ ಮುಂದೆಯೂ ಕ್ಷಮೆ ಕೇಳಿದ್ದರು.
Comments are closed.