ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂದು ಗುರುತಿಸಲಾಗಿದೆ. ಆತ ದೇವಸ್ಥಾನ, ದೈವಸ್ಥಾನ, ಮಸೀದಿ ಹಾಗೂ ಸಿಖ್ ಧಾರ್ಮಿಕ ಕೇಂದ್ರ ಸೇರಿದಂತೆ 18 ಕಡೆಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದ ಎಂದು ತಿಳಿದು ಬಂದಿದೆ.
ಓರ್ವ ವ್ಯಕ್ತಿ ಕೊರಗಜ್ಜನ ಗುಡಿಗೆ ಬಂದು ವಸ್ತುವೊಂದನ್ನು ಇಟ್ಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದರ ಆಧಾರದಲ್ಲಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಂದಿಗುಡ್ದೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಪೊಲೀಸರ ವಶದಲ್ಲಿರುವ ದೇವದಾಸ್ ಹುಬ್ಬಳ್ಳಿ ಮೂಲದವರಾಗಿದ್ದು, 1997 ನೇ ಇಸವಿಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಮಂಗಳೂರಿನ ಬಂದರಿನ ಟ್ರಾನ್ಸ್ ಪೋರ್ಟ್ ಕಛೇರಿಯೊಂದರಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ. ಅನೇಕ ಕಡೆಗಳಲ್ಲಿ ಕೆಲಸ ಮಾಡಿ ಈಗ ಸರಿಯಾದ ಕೆಲಸವಿಲ್ಲದೆ ಗುಜರಿ ಪೇಪರ್ ಬಾಕ್ಸ್ ಗಳನ್ನು ಮಾರಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ.
Comments are closed.