ಕರ್ನಾಟಕ

ಎಡಿಜಿಪಿ ಭಾಸ್ಕರ್​ ರಾವ್​ ಸೇವೆಯಿಂದ ಸ್ವಯಂ ನಿವೃತ್ತಿ ಅರ್ಜಿ ಅನುಮೋದಿಸಿದ ಕರ್ನಾಟಕ ಸರ್ಕಾರ

Pinterest LinkedIn Tumblr

ಬೆಂಗಳೂರು: ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಅವರು ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆಂದು ಕೆಲ ಸುದ್ದಿಗಳು ಪ್ರಕಟಗೊಂಡಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾಸ್ಕರ್ ರಾವ್ ಅವರು, ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದರೊಂದಿಗೆ ಕಾಲ ಕಳೆಯಲು ಬಯಸಿದ್ದೇನೆಂದು ಹೇಳಿದ್ದಾರೆ.

1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾಸ್ಕರ್ ರಾವ್ ಅವರು 2021 ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿಗೆ (VRS) ಅರ್ಜಿ ಸಲ್ಲಿಸಿದ್ದರು. ಕೂಡಲೇ ಅನುಮೋದನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅವರ ಕಡತ ಮುಖ್ಯಮಂತ್ರಿ ಬಳಿ ಬಾಕಿ ಉಳಿದಿದ್ದು, ಇತ್ತೀಚೆಗಷ್ಟೇ ಅವರು ಸಹಿ ಹಾಕಿದ್ದಾರೆಂದು ತಿಳಿದುಬಂದಿದೆ. ಇವರ ನಿವೃತ್ತಿಯೊಂದಿಗೆ, ಎಡಿಜಿಪಿ ಶ್ರೇಣಿಯ ಎರಡನೇ ಹುದ್ದೆ ರಾಜ್ಯದಲ್ಲಿ ಖಾಲಿ ಬೀಳಲಿದೆ.

Comments are closed.