ಕರ್ನಾಟಕ

ವೀಕೆಂಡ್ ಕರ್ಫ್ಯೂ: ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆನ ತನಕ ಮದ್ಯ ಮಾರಾಟ ನಿಷೇಧ..!

Pinterest LinkedIn Tumblr

ಬೆಂಗಳೂರು: ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ವಿಧಿಸಲಾಗಿರುವ ವೀಕೆಂಡ್‌ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ವೀಕೆಂಡ್‌ ಕರ್ಫ್ಯೂ ದಿನಗಳಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಿದ್ದು ಮದ್ಯ ಪ್ರಿಯರಿಗೆ ತಲೆ ನೋವಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ವಾರಾಂತ್ಯ ಕರ್ಫ್ಯೂ ಇರುವ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಲೈಸೆನ್ಸ್‌ ಇರುವ ಮದ್ಯ ಮಾರಾಟ ಮಳಿಗೆಗಳು ಸಾಮಾಜಿಕ ಅಂತರವನ್ನು 6 ಅಡಿಗಳಿಗೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು. ಮಳಿಗೆಗಳಲ್ಲಿ ಕೆಲಸ ನಿರ್ವಹಿಸುವವರು ಗ್ಲೌಸ್‌, ಮಾಸ್ಕ್‌ ಹಾಗೂ ಅಂಗಡಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು.

ಕೋವಿಡ್‌ಗೆ ಸಂಬಂಧಿಸಿದ ಯಾವುದೇ ನಿಯಮ ಉಲ್ಲಂಘನೆಯಾದಲ್ಲಿ ಅಂತಹ ಮಳಿಗೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

Comments are closed.