ಕರ್ನಾಟಕ

ಶ್ರೀರಂಗಪಟ್ಟಣದಲ್ಲಿ ಮಸೀದಿ ಕುರಿತು ವಿವಾದಿತ ಹೇಳಿಕೆ: ಕಾಳಿಮಠದ ಋಷಿಕುಮಾರ್ ಸ್ವಾಮೀಜಿ ಬಂಧನ

Pinterest LinkedIn Tumblr

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ ವೇಳೆ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಿಮಠದ ಋಷಿಕುಮಾರ್ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಮುಂದೆ ನಿಂತು ಇವರು ಮಸೀದಿ ಒಡೆಯುವ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆ ಇಂದು ಅವರನ್ನು ಚಿಕ್ಕಮಗಳೂರಿನ ಮಠದಿಂದ ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿ ಕರೆ ತಂದಿದ್ದಾರೆ. ಸ್ವಾಮೀಜಿಗೆ ಜ್ವರ ಇರುವ ಹಿನ್ನೆಲೆಯಲ್ಲಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು.
ಈ ಬಗ್ಗೆ ಸ್ವಾಮೀಜಿ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 5 ಗಂಟೆಗೆ ನನ್ನನ್ನು ಬಂಧಿಸಿದ್ದಾರೆ. ಆದ್ರೆ, ನಾನು ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ. ನಾನು ಇರುವವರೆಗೂ ನನ್ನ ಹೋರಾಟ ಇರುತ್ತೆ ಎಂದು ತಿಳಿಸಿದ್ದಾರೆ.

Comments are closed.