ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್(46) ಇಂದು ನಿಧನರಾಗಿದ್ದಾರೆ.

ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಕುರಿತು ಪ್ರದೀಪ್ ರಾಜ್ ಸಹೋದರ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಯಶ್ ಅಭಿನಯದ ಕಿರಾತಕ ಸಿನಿಮಾ ಪ್ರದೀಪ್ ರಾಜ್ ಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಬಳಿಕ ದುನಿಯಾ ವಿಜಯ್ ಗೆ ರಜನಿಕಾಂತ, ಸತೀಶ್ ಅಭಿನಯದ ಅಂಜದ ಗಂಡು, ಗಣೇಶ್ ಗೆ ಮಿಸ್ಟರ್ 420, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು.
ಪಾಂಡಿಚೆರಿಯಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ. ಪ್ರದೀಪ್ ರಾಜ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.
Comments are closed.