ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ, ವಿಪಕ್ಷದ ಉಪನಾಯಕರಾಗಿ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರು ನೇಮಕವಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅವರು ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಗೇಣಿದಾರರು, ಇಲ್ಲಿ ಯಾರಿಗೂ ಸ್ಥಾನ ಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಖಾದರ್ ಅವರನ್ನು ಎಐಸಿಸಿ ಈ ಸ್ಥಾನಕ್ಕೆ ನೇಮಿಸಿದೆ.
ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದು, ಪರಿಷತ್ ನಲ್ಲಿ ಬಿ.ಕೆ.ಹರಿಪ್ರಸಾದ್ ಅವರನ್ನು ವಿಪಕ್ಷ ನಾಯಕನನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿತ್ತು. ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದ್ದ ಕಾಂಗ್ರೆಸ್ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕ ಖಾದರ್ ಅವರಿಗೆ ಆದ್ಯತೆ ನೀಡಿದೆ.
Comments are closed.