ಅಂತರಾಷ್ಟ್ರೀಯ

ರಷ್ಯಾ-ಉಕ್ರೇನ್ ನಡುವೆ ಯುದ್ಧ ಸಾಧ್ಯತೆ; ಕೂಡಲೇ ಉಕ್ರೇನ್ ಬಿಟ್ಟು ಹೊರಡಲು ಭಾರತೀಯ ರಾಯಭಾರ ಕಚೇರಿ

Pinterest LinkedIn Tumblr

ನವದೆಹಲಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಪ್ರಸ್ತುತ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಂಗಳವಾರ ತಿಳಿಸಿದೆ.

ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಭಾರತದ ರಾಯಭಾರ ಕಚೇರಿಯು, “ಉಕ್ರೇನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯ ನಡುವೆ ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿಶೇಷವಾಗಿ ವಾಸ್ತವ್ಯದ ಅಗತ್ಯವಿಲ್ಲದ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಹೊರಡುವ ಬಗ್ಗೆ ಯೋಚಿಸಬಹುದು. ಭಾರತೀಯ ಪ್ರಜೆಗಳು ಈ ಬಿಕ್ಕಟ್ಟಿನಿಂದ ತೊಂದರೆಗೆ ಒಳಗಾಗುವುದನ್ನು ತಪ್ಪಿಸಬೇಕು. ಉಕ್ರೇನ್‌ ಒಳಗೆಯೂ ಅಗತ್ಯವಿದ್ದರೆ ಮಾತ್ರ ಸಂಚಾರ ಮಾಡಿ ಎಂದು ಸಲಹೆ ನೀಡಲಾಗಿದೆ.

“ಉಕ್ರೇನ್‌ನಲ್ಲಿ ಇರುವ ಭಾರತೀಯ ಪ್ರಜೆಗಳ ಸ್ಥಿತಿಯನ್ನು ತಿಳಿಯಲು ಸುಲಭವಾಗಲು, ಅಗತ್ಯ ಬಂದಾಗ ಭಾರತೀಯ ಪ್ರಜೆಗಳನ್ನು ಸಂಪರ್ಕ ಮಾಡಲು ಸುಲಭವಾಗುವಂತೆ ರಾಯಭಾರ ಕಚೇರಿಗೆ ಅಗತ್ಯವಿರುವ ಮಾಹಿತಿಯನ್ನು ನೀಡುವಂತೆ ವಿನಂತಿ ಮಾಡಲಾಗಿದೆ. ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ರಾಯಭಾರ ಕಚೇರಿಯು ಸಾಮಾನ್ಯವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತದೆ. ಎಂದು ಕೂಡಾ ತಿಳಿಸಲಾಗಿದೆ.

ಜನವರಿ 26 ರಂದು, ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಉಕ್ರೇನ್‌ನಲ್ಲಿ ನೆಲೆಸಿರುವ ತನ್ನ ನಾಗರಿಕರನ್ನು ಶೀಘ್ರದಲ್ಲೇ ನೋಂದಾಯಿಸಿಕೊಳ್ಳುವಂತೆ ಕೇಳಿಕೊಂಡಿತ್ತು. “ಭಾರತೀಯ ನಾಗರಿಕರೊಂದಿಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುವ ಉದ್ದೇಶದಿಂದ ಮತ್ತು ತ್ವರಿತ ರೀತಿಯಲ್ಲಿ ಮಾಹಿತಿಯನ್ನು ಪ್ರಸಾರ ಮಾಡುವ ಉದ್ದೇಶದಿಂದ, ಭಾರತದ ರಾಯಭಾರ ಕಚೇರಿ, ಪ್ರಸ್ತುತ ಉಕ್ರೇನ್ ಪ್ರದೇಶದಲ್ಲಿ ನೆಲೆಗೊಂಡಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರಿಗೆ ಈ ಕೆಳಗಿನ ಫಾರ್ಮ್ ಅನ್ನು ಭರ್ತಿ ಮಾಡಲು ಕೈವ್ ವಿನಂತಿಸುತ್ತದೆ. ಪ್ರಸ್ತುತ ಭಾರತದಲ್ಲಿದ್ದು ಆನ್‌ಲೈನ್‌ ಶಿಕ್ಷಣವನ್ನು ಪಡೆಯುತ್ತಿರುವವರು ಈ ಫಾರ್ಮ್ ಅನ್ನು ಭರ್ತಿ ಮಾಡಬೇಕಾಗಿಲ್ಲ, ಎಂದು ಭಾರತೀಯ ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Comments are closed.