ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳಿವುಗಳನ್ನು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹರ್ಷ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದೆ. ಪೊಲೀಸರ ತನಿಖೆ ವೇಳೆ ಸಾಕಷ್ಟು ಸುಳಿವುಗಳನ್ನು ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.
ಶಿವಮೊಗ್ಗದ ಘಟನೆ ಬೆನ್ನಲ್ಲೇ ಮುಂದೆ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆರೋಪಿಗಳು ಯಾರೇ ಆಗಿದ್ದರೂ, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯನವರ ಮಾತು ಯಾವಾಗಲೂ ತರ್ಕಬದ್ಧವಾಗಿ ಇರುವುದಿಲ್ಲ. ಅವರು ತರ್ಕವನ್ನು ಬಿಟ್ಟು ಮಾತನಾಡುತ್ತಾರೆ ಎಂದರು.
Comments are closed.