ಕರ್ನಾಟಕ

10 ತಿಂಗಳ ಹಿಂದಷ್ಟೇ ಮದುವೆಯಾದ ಪತ್ನಿ ಆತ್ಮಹತ್ಯೆಯ ಕೆಲ ಕ್ಷಣದಲ್ಲೇ ಪಾರೆಸ್ಟ್ ಗಾರ್ಡ್ ಪತಿಯೂ ಆತ್ಮಹತ್ಯೆ

Pinterest LinkedIn Tumblr

ಕೊಡಗು: ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನೊಂದ ಪತಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬಿರುನಾಣಿಯಲ್ಲಿ ಈ ಪ್ರಕರಣ ನಡೆದಿದ್ದು, ಯುವರಾಜ್ (25), ಪತ್ನಿ ಶಿಲ್ಪಾ (22) ಆತ್ಮಹತ್ಯೆ ಮಾಡಿಕೊಂಡಡವರು.

ಶ್ರೀಮಂಗಲ ವನ್ಯಜೀವಿ ವಿಭಾಗದ ವ್ಯಾಪ್ತಿಯ ಬಿರುನಾಣಿಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗದ ಯುವರಾಜ್ ಕಳೆದ 10 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಬಿರುನಾಣಿಯ ಸಿ.ಸತ್ಯ ಎಂಬವರ ಮನೆಯಲ್ಲಿ ವಾಸವಾಗಿದ್ದರು.

ಭಾನುವಾರ ಸಂಜೆ ಕರ್ತವ್ಯ ಮುಗಿಸಿ ಯುವರಾಜ್ ಮನೆಗೆ ಬಂದಾಗ ಪತ್ನಿ ಶಿಲ್ಪಾ ಬಾತ್ ರೂಮ್’ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದ್ದು, ಇದನ್ನು ನೋಡಿ ಮನೆ ಮಾಲಕ ಸತ್ಯ ಅವರನ್ನು ಕರೆದು ಮೃತದೇಹವನ್ನು ಇಬ್ಬರೂ ಸೇರಿ ಇಳಿಸಿದ್ದಾರೆ.

ಈ ವಿಷಯವನ್ನು ಸಂಬಂಧಿಕರಿಗೆ ದೂರವಾಣಿ ಮೂಲಕ ತಿಳಿಸಿದ್ದ ಯುವರಾಜ್, ಸ್ವಲ್ಪ ಸಮಯದಲ್ಲೇ ಬಾತ್ ರೂಮ್’ಗೆ ಹೋಗಿ ಪತ್ನಿ ನೇಣು ಬಿಗಿದು ಕೊಂಡಿದ್ದ ವೇಲ್’ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Comments are closed.