ಕರಾವಳಿ

ಮಣಿಪಾಲ ಟೈಗರ್ ಸರ್ಕಲ್ ಬಳಿ ಖಾಸಗಿ ಬಸ್ಸಿಗೆ ಬೆಂಕಿ; ಸುಟ್ಟು ಕರಕಲಾದ ಬಸ್, ಪ್ರಯಾಣಿಕರು ಪಾರು..!

Pinterest LinkedIn Tumblr

ಉಡುಪಿ: ಮಣಿಪಾಲ ಟೈಗರ್ ಸರ್ಕಲ್ ಬಳಿ ಇಂದು (ಫೆ.23) ಮುಂಜಾನೆಗೆ 4.30ರ ಸುಮಾರಿಗೆ ಬೆಂಗಳೂರಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ದುರ್ಗಾಂಬ ಬಸ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟು ಕರಕಲಾಗಿದೆ.

ಮಣಿಪಾಲದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು ಕೂಡಲೇ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಇಳಿದಿದ್ದು, ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ತಕ್ಷಣ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಈ ವೇಳೆಗಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಮಣಿಪಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments are closed.