ಬೆಂಗಳೂರು: ಸಮವಸ್ತ್ರದ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು (ಮಾ.15) ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ತೀರ್ಪು ನೀಡಿ ವಿಚಾರಣೆಯನ್ನು ಇಂದು ಮುಕ್ತಾಯಗೊಳಿಸಿದೆ.
ಹೈಕೋರ್ಟ್ ನೀಡಿವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಹಿಜಾಬ್ ವಿವಾದ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿ ನಂತರ ಕುಂದಾಪುರ, ಶಿವಮೊಗ್ಗ ಸಹಿತ ಹಲವು ಜಿಲ್ಲೆಗಳಿಗೆ ರಾಜ್ಯದ ಹಲವೆಡೆ ವ್ಯಾಪಿಸಿ ಗದ್ದಲ, ಲಾಠಿಚಾರ್ಜ್ ಕೂಡ ನಡೆದಿತ್ತು. ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿನಿಯರು ತರಗತಿಗಳಿಗೆ, ಪರೀಕ್ಷೆಗಳಿಗೆ ಬಹಿಷ್ಕರಿಸಿ, ಪರೀಕ್ಷೆಗಳನ್ನು ವಿಶ್ವ ವಿದ್ಯಾಲಯಗಳು, ಕಾಲೇಜುಗಳು ಮುಂದೂಡಿದ ಘಟನೆಗಳು ನಡೆದಿತ್ತು.
Comments are closed.