ಉಡುಪಿ: ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ಧೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಐದು, ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಭೆ, ಸಮಾರಂಭ, ಬ್ಯಾನರ್ ಅಳವಡಿಸುವುದು, ಪಟಾಕಿಗಳನ್ನು ಸಿಡಿಸುವುದು, ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದು, ಶಾಲಾ-ಕಾಲೇಜು ಆವರಣದಲ್ಲಿ ಪೂರ್ನಾನುಮತಿ ಇಲ್ಲದೇ ಪ್ರವೇಶ ನಿರ್ಬಂಧ ಮಾಡಲಾಗಿದೆ.
ಮುಖ್ಯಸ್ಥರ ಪೂರ್ನಾನುಮತಿ ಇಲ್ಲದೇ ಅಪರಿಚಿತ ವ್ಯಕ್ತಿಗಳು ಶಿಕ್ಷಣ ಸಂಸ್ಥೆಯನ್ನು ಪ್ರವೇಶ ಮಾಡುವುದನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
Comments are closed.