ಕರಾವಳಿ

ಹಿಜಾಬ್ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕುಂದಾಪುರ ಜ್ಯೂನಿಯರ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಹಾಜರ್!

Pinterest LinkedIn Tumblr

ಕುಂದಾಪುರ: ಮಂಗಳವಾರ ಪ್ರಕಟವಾದ ಹೈಕೋರ್ಟ್ ಐತಿಹಾಸಿಕ ತೀರ್ಪಿನ‌ ಬಳಿಕ‌ ಕುಂದಾಪುರ ತಾಲೂಕಿನಲ್ಲಿ ಮತ್ತೆ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದೆ. ಕುಂದಾಪುರಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಭೇಟಿ ನೀಡಿ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರಿಂದ ಮಾಹಿತಿ ಕಲೆಹಾಕಿದರು.

ಬುಧವಾರ ಶಾಂತಿಯುತವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸಿದ್ದಾರೆ. ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ‌ ಪ್ರವೇಶಕ್ಕೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಹನ್ನೊಂದು ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ. ಹಿಜಾಬ್ ಪರ ಹೋರಾಟದಲ್ಲಿ ಭಾಗಿಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ತರಗತಿಗೆ ಆಗಮಿಸಿದ್ದು, ವಿದ್ಯಾರ್ಥಿಗಳಿಗೆ ಹಿಜಾಬ್ ತೆರವುಗೊಳಿಸಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಯರು ಅಲ್ಲಿ ಹಿಜಾಬ್ ಕಳಚಿಟ್ಟು ತರಗತಿಗೆ ಹಾಜಾರಾಗಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ‌ ಪರೀಕ್ಷೆಯ ತಯಾರಿಗಾಗಿ ರಜೆ ನೀಡಿರುವ ಹಿನ್ನೆಲೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಆಗನಿಸಿದ್ದರು. ಕುಂದಾಪುರದ ಜೂನಿಯರ್ ಕಾಲೇಜು ವ್ಯಾಪ್ತಿಯಲ್ಲಿ ಬಿಗುಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Comments are closed.