ಮಂಗಳೂರು: ತುಳು ಸಿನಿಮಾ ‘ಇಂಗ್ಲಿಷ್-ಎಂಕ್ಲೆಗ್ ಬರ್ಪುಜಿ ಬ್ರೋ’ ಮಾರ್ಚ್ 25 ರಿಂದ ಏಪ್ರಿಲ್ 4 ರವರೆಗೆ ಲೋಕಲ್ವುಡ್ ಅಪ್ಲಿಕೇಶನ್ನಲ್ಲಿ ಪ್ರದರ್ಶನಗೊಳ್ಳಲಿದೆ.

ಆಕ್ಮೆ ಮೂವೀಸ್ ಬ್ಯಾನರ್ ಅಡಿಯಲ್ಲಿ ದುಬೈ ಮೂಲದ ಖ್ಯಾತ ಉದ್ಯಮಿ ಮತ್ತು ಕನ್ನಡ ಸಿನಿಮಾ ನಿರ್ಮಾಪಕ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಅವರು ಕೆ ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ‘ಇಂಗ್ಲಿಷ್-ಎಂಕ್ಲೆಗ್ ಬರ್ಪುಜಿ ಬ್ರೋ’ ಸಿನಿಮಾ ನಿರ್ಮಿಸಿದ್ದಾರೆ.
ಚಿತ್ರದಲ್ಲಿ ಪೃಥ್ವಿ ಅಂಬಾರ್ ಮತ್ತು ನವ್ಯಾ ಪೂಜಾರಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ್ ಬೋಳಾರ್, ವಿಸ್ಮಯ ವಿನಾಯಕ್ ಮತ್ತು ದೀಪಕ್ ರೈ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಖ್ಯಾತ ನಟ ಅನಂತ್ ನಾಗ್ ಅವರು ‘ಇಂಗ್ಲಿಷ್’ ಮೂಲಕ ತುಳು ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದು ಸ್ಮರಣೀಯ. ಚಿತ್ರಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣವಿದೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದಾರೆ.
ಕೆಳಗಿನ ಲಿಂಕ್ಗಳನ್ನು ಬಳಸಿಕೊಂಡು ಲೋಕಲ್ವುಡ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬಹುದು
Android ಬಳಕೆದಾರರು:
https://play.google.com/store/apps/details?id=biz.atconline.localwood
ಐಒಎಸ್ ಬಳಕೆದಾರರು:
https://apps.apple.com/in/app/localwood-daijiworld/id1563895115
Comments are closed.