ಬೆಂಗಳೂರು: ಹಿಜಾಬ್ ತೀರ್ಪು ಪ್ರಕಟಿಸಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಅಪರಿಚಿತ ವ್ಯಕ್ತಿ ವಿರುದ್ಧ ವಿಧಾನಸೌಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ವಕೀಲರಾದ ಸುಧಾ ಕಟ್ವಾ ಅವರು ನೀಡಿದ ದೂರಿನ ಮೇರೆಗೆ ತಮಿಳುನಾಡಿನ ಮಧುರೈ ಮೂಲದ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಾರ್ಚ್ 19ರಂದು ಬೆಳಗ್ಗೆ 10.22ರ ಸುಮಾರಿಗೆ ಸುಧಾ ಕಧಿಟ್ವಾ ಅವರ ಸಹೋದ್ಯೋಗಿ ವಕೀಲ ಉಮಾಧಿಪತಿ ಎಂಬುವವರ ಮೊಬೈಲ್ ವಾಟ್ಸಪ್‌ಗೆ ಸುಮಾರು ನಾಲ್ಕು ನಿಮಿಷದ ವಿಡಿಯೊವೊಂದು ಬಂದಿದೆ. ಈ ವಿಡಿಯೋ ತಮಿಳು ಭಾಷೆಯಲ್ಲಿದ್ದು, ಹಿಜಾಬ್ ವಿವಾದದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಮೂರ್ತಿಗಳ ಬಗ್ಗೆ ಏಕವಚನದಲ್ಲಿಯೇ ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾನೆ. ಈ ಮೂಲಕ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಹಾಗೂ ವಿವಿಧ ಗುಂಪುಗಳ ಮಧ್ಯೆ ದ್ವೇಷ ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾನೆ. ಈ ಸಂಬಂಧ ಅಪರಿಚಧಿತ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸುಧಾ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿವಾದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆದೇಶ ನೀಡುವ ಮೂಲಕ ಹಿಜಾಬ್ ತಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದ ವಿದ್ಯಾರ್ಥಿನಿಯರ ವಾದವನ್ನು ತಿರಸ್ಕರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್ ಸಂಘಟನೆಯಿಂದ ಬೆದರಿಕೆ ಬಂದಿದೆ ಎನ್ನಲಾಗಿದೆ. ಮಧುರೈನಲ್ಲಿ ಮಾರ್ಚ್ 17ರಂದು ನಡೆದಿದ್ದ ಬಹಿರಂಗ ಸಮಾವೇಶದಲ್ಲಿ ತಮಿಳುನಾಡು ತೌಹೀದ್ ಜಮಾತ್ (ಟಿಎಂಟಿಜೆ) ಹೆಸರಿನ ಮುಸ್ಲಿಂ ಸಂಘಟನೆಯ ಮುಖಂಡ ಆರ್ ರೆಹಮತುಲ್ಲಾ, ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
Comments are closed.