ಕರ್ನಾಟಕ

ತುಮಕೂರು ಪಾವಗಡದಲ್ಲಿ ಖಾಸಗಿ ಬಸ್ ಅಪಘಾತದ ಬಳಿಕ ನಾಪತ್ತೆಯಾಗಿದ್ದ ಚಾಲಕ ಪೊಲೀಸ್ ವಶಕ್ಕೆ..!

Pinterest LinkedIn Tumblr

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಚಾಲಕ ರಘು ಎಂಬಾತನನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಎಫ್.ಐ.ಆರ್.ನಲ್ಲಿ ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ ಪ್ರಕರಣ ದಾಖಲು ಮಾಡಲಾಗಿದೆ. ಈ ಬಸ್ ಚಾಲಕ ಆರೋಪಿ ಎಂದು ಉಲ್ಲೇಖಿಸಿ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶನಿವಾರ ತುಮಕೂರು ಪಳವಳ್ಳಿ ಕಟ್ಟೆ ತಿರುವಿನಲ್ಲಿ ಸಂಭವಿಸಿದ ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು ಇಬ್ಬರು ಕಾಲೇಜು ವಿದ್ಯಾರ್ಥಿನಿಯರಾಗಿದ್ದು ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. 40 ಕ್ಕೂ ಹೆಚ್ಚು ಮಂದಿ ಗಾಯಾಳುಗಳು ತುಮಕೂರು ಹಾಗೂ ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ 7 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರನ್ನು ಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಎಂದು ಗುರುತಿಸಲಾಗಿದೆ. ಅಲ್ಲದೆ ಬಸ್ ದುರಂತದಲ್ಲಿ ನಾಪತ್ತೆಯಾಗಿದ್ದ ಕಂಡಕ್ಟರ್ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

Comments are closed.