ಕರಾವಳಿ

ಕಾಪು ಮಲ್ಲಾರು ಗುಜರಿ ಅಂಗಡಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ: ಇಬ್ಬರು ಮೃತ್ಯು, ಮೂವರು ಗಂಭೀರ

Pinterest LinkedIn Tumblr

ಉಡುಪಿ: ಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಸೋಮವಾರ ಸಂಭವಿಸಿದೆ.

ಮೃತರನ್ನು ರಜಾಕ್‌ ಮಲ್ಲಾರ್‌ ಮತ್ತು ರಜಬ್‌ ಚಂದ್ರನಗರ ಎಂದು ಗುರುತಿಸಲಾಗಿದೆ.

ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ತೀವೃತೆಗೆ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕಾಪು ಪೊಲೀಸರು ಧಾವಿಸಿದ್ದಾರೆ.

Comments are closed.