ಉಡುಪಿ: ಜಿಲ್ಲೆಯ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪ್ರಕರಣದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ನಿಯಾಝ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಾರೆ.
ಘಟನೆಯಲ್ಲಿ ಈ ಮೊದಲು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಸ್ಥಳದಲ್ಲಿಯೇ ಮೃತರಾಗಿದ್ದು , ಇತರ ಮೂವರು ಗಂಭೀರ ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯ ಬಳಿಕ ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಉಡುಪಿ ಅಗ್ನಿಶಾಮಕ ದಳ ಹಾಗೂ ಐಎಸ್ ಪಿ ಆರ್ ಎಲ್ ನ ಅಗ್ನಿಶಾಮಕ ದಳ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿದರು.
Comments are closed.