ಕರಾವಳಿ

ಮಂಗಳೂರಿನಲ್ಲಿ ಅಂಬೇಡ್ಕರ್ ಜಯಂತಿಗೆ ಅಳವಡಿಸಿದ್ದ ಫ್ಲೆಕ್ಸ್’ಗೆ ಹಾನಿ; ಇಬ್ಬರ ಬಂಧನ

Pinterest LinkedIn Tumblr

ಮಂಗಳೂರು: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಸೈಗೋಳಿ ನಿವಾಸಿ ದಾಮೋದರ ಎಂಬುವವರ ಪುತ್ರ ಶರಣ್ (24) ಹಾಗೂ ಹರೇಕಳದ ಗೋಪಾಲಕೃಷ್ಣ ಎಂಬುವವರ ಪುತ್ರ ಸುಜಿತ್ (26) ಬಂಧಿತ ಆರೋಪಿಗಳು.

ವೈಯಕ್ತಿಕ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.