(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ : ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ 6.15ರ ಸುಮಾರಿಗೆ ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ತನ್ನದೇ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕರಾಗಿದ್ದರು. ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಬೆಳಿಗ್ಗೆನ ಜಾವ ತನ್ನ ಕಾರಿನಲ್ಲಿ ಗಣೇಶ್ ಶೆಟ್ಟಿಯವರ ಮನೆಗೆ ಬಂದು ಕಾರನ್ನು ಗೇಟ್ ಹೊರಗೆ ಪಾರ್ಕ್ ಮಾಡಿ ಮನೆಯ ಸಿಟ್ಔಟಿಗೆ ಬಂದು ಈ ಕೃತ್ಯ ಮಾಡಿಕೊಂಡಿದ್ದಾರೆ.
ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿದ್ದಾರೆ.
Comments are closed.