ಕುಂದಾಪುರ: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ವಸ್ತುಗಳ ಬಳಕೆ ಮತ್ತು ಸೇವನೆ ದುಶ್ಪರಿಣಾಮದ ಮಾಹಿತಿ ಕಾರ್ಯಗಾರವನ್ನು ಗಂಗೊಳ್ಳಿಯ ಎಸ್.ವಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ. ಮಾತನಾಡಿ, ಮಾದಕ ವಸ್ತುಗಳು ತಮ್ಮ ಜೀವನ ಹಾಳು ಮಾಡುವ ಜೊತೆಗೆ ಸಮಾಜವನ್ನು ಹಾಳುಗೈಯುತ್ತದೆ. ವಿದ್ಯಾರ್ಥಿಗಳು ಇಂತಹ ದುಷ್ಚಟದಿಂದ ದೂರವಿದ್ದು ಪಠ್ಯ ಹಾಗೂ ಆಟೋಟಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದರು.
ಗಂಗೊಳ್ಳಿ ಠಾಣಾ ಪಿಎಸ್ಐ ವಿನಯ ಎಂ ಕೊರ್ಲಹಳ್ಳಿ ಮತ್ತು ಶಾಲಾ ಪ್ರಾಂಶುಪಾಲರಾದ ಕವಿತಾ ಮೊದಲಾದವರು ಹಾಜರಿದ್ದರು. ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ನಡೆಸಲಾಯಿತು.
Comments are closed.