ಉಡುಪಿ: ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು (ಜು.5) ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.

ಕಳೆದೆರಡು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಈಮೊದಲು ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜಿಗೆ ಮಾತ್ರ ರಜೆ ನೀಡಲಾಗಿದ್ದು ಪರಿಷ್ಕೃತ ಆದೇಶದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜಿಗೂ ರಜೆ ನೀಡಲಾಗಿದೆ.

ಇನ್ನು ಸೋಮವಾರ ಮಧ್ಯಾಹ್ನದ ಬಳಿಕ ಬಿರುಸಿನಿಂದ ಸುರಿಯುತ್ತಿರುವ ಮಳೆ ಮಂಗಳವಾರ ಮುಂಜಾನೆಯೂ ಎಡಬಿಡದೆ ಸುರಿಯುತ್ತಿದೆ.
Comments are closed.