ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಜಗದೀಪ್ ಧನಕರ್ ವಿರುದ್ದ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವಾ ಅವರನ್ನು ಅಭ್ಯರ್ಥಿಯನ್ನಾಗಿ ಪ್ರತಿಪಕ್ಷಗಳು ಘೋಷಣೆ ಮಾಡಿದೆ.

ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಮಾರ್ಗರೇಟ್ ಆಳ್ವಾ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದರು ಮತ್ತು ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ವಕೀಲೆಯಾಗಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
80 ರ ಹರೆಯದ ಮಾರ್ಗರೇಟ್ ಆಳ್ವಾ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ, ಗುಜರಾತ್,ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿ ಆಗಿ ಆಗಸ್ಟ್ 2014 ರಲ್ಲಿ ತನ್ನ ಅಧಿಕಾರಾವಧಿಯ ಅಂತ್ಯದವರೆಗೆ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕಿ.ರಾಜ್ಯ ಸಭೆ, ಲೋಕ ಸಭಾ ಸದಸ್ಯೆಯಾಗಿ, ಕೇಂದ್ರ ಸಚಿವೆಯಾಗಿ ಕೆಲಸ ಮಾಡಿದ ಸುದೀರ್ಘ ರಾಜಕೀಯ ಮತ್ತು ಆಡಳಿತ ಅನುಭವ ಹೊಂದಿದ್ದಾರೆ.
Comments are closed.