ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕರಿಗೆ ಧಿಕ್ಕಾರ ಕೂಗಿ ಘೇರಾವ್ ಹಾಕಿದ ಸ್ವಪಕ್ಷದ ಕಾರ್ಯಕರ್ತರು..!

Pinterest LinkedIn Tumblr

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಬೆಳ್ಳಾರೆ ಜಂಕ್ಷನಿಗೆ ಆಗಮಿಸಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿ‌ ಘೇರಾವ್ ಹಾಕಿದ ಘಟನೆ ನಡೆದಿದೆ.

ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬೆಳ್ಳಾರೆಗೆ ಬಂದಿಳಿಯುತ್ತಿದ್ದಂತೆಯೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ನಾಯಕರ ವಿರುದ್ದ ಹಿಂದೂ ಸಂಘಟನೆಯ ಸಾವಿರಾರು ಕಾರ್ಯಕರ್ತರು ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Comments are closed.