ಕರ್ನಾಟಕ

ತಿರುಪತಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ವೈ ಸಹಿತ ಬಿಜೆಪಿ ನಾಯಕರ ಭೇಟಿ: ವಸತಿಗೃಹ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ

Pinterest LinkedIn Tumblr

ಆಂದ್ರಪ್ರದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಇಂದು ಕೃಷ್ಣ ಜನ್ಮಾಷ್ಠಮಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಶಾಸಕ ಎಸ್ ಆರ್ ವಿಶ್ವನಾಥ್ ಸೇರಿ ಹಲವರು ತಿರುಪತಿ ವೆಂಕಟರಮಣ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.

Comments are closed.