(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ವ್ಯಕ್ತಿಯೊಬ್ಬರು ಸೇತುವೆ ಮೇಲೆ ಸೈಕಲ್ ಇಟ್ಟು ಪಂಚಗಂಗಾವಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸಂಗಮ್ ಸೇತುವೆಯಲ್ಲಿ ನಡೆದಿದೆ.

ಕುಂದಾಪುರ ಸಂಗಮ್ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ವಾಹನ ಸವಾರರು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದು ಯುವಕನೋರ್ವ ರಾಷ್ಟ್ರೀಯ ಹೆದ್ದಾರಿಯ ಸೇತುವೆಯಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನದಿಗೆ ಹಾರುವ ಮೊದಲು ಅಪರಿಚಿತ ಯುವಕ ಮೊಬೈಲ್ ಫೋನ್ ಸೇತುವೆ ಮೇಲೆ ಇಟ್ಟಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ಆತ್ಮಹತ್ಯೆಗೆ ಶರಣಾದ ವ್ಯಕ್ತಿಗಾಗಿ ನದಿಯಲ್ಲಿ ದೋಣಿ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
Comments are closed.