ಕರ್ನಾಟಕ

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದಡಿ ಶಾಸಕ ಗರುಡಾಚಾರ್​ಗೆ 2 ತಿಂಗಳು ಜೈಲು

Pinterest LinkedIn Tumblr

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣ ಸಂಬಂಧ ಇಂದು ತೀರ್ಪು ನೀಡಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಗರುಡಾಚಾರ್ ಜಾಮೀನು ಕೂಡ ಪಡೆದಿದ್ದಾರೆ ಎಂಬ ಮಾಹಿತಿಯಿದೆ.

ಉದಯ್ ಗರುಡಾಚಾರ್ 2018ರ ಚುನಾವಣೆಯಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.

 

 

Comments are closed.