ಕರಾವಳಿ

ಸುಳ್ಳು ದೂರು ನೀಡಿ ಕೋಮು ಸಂಘರ್ಷಕ್ಕೆ ಯತ್ನ; ಭಟ್ಕಳ ಮೂಲದ ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ

Pinterest LinkedIn Tumblr

ಕಾರವಾರ: ಭಟ್ಕಳದಲ್ಲಿ ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತ ಹಿಂದೂ ಕಾರ್ಯಕರ್ತರಾಗಿದ್ದಾರೆ.

ಇಬ್ಬರೂ ವೈಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸಿ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿರುವುದು ತಿಳಿದುಬಂದ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಸೋಮಯ್ಯ ಮತ್ತು ವೆಂಕಟೇಶ ಎಂಬವರು ಭಟಟ್ಕಳದಲ್ಲಿ ಕೋಮು ಸೌಹಾರ್ದತೆ ಕದಡಲು ಮತ್ತು ಶಾಂತಿ ಭಂಗ ಮಾಡಲು ಇಬ್ಬರೂ ವೈಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸುತ್ತಾನೆ. ಬಳಿಕ ಹಲ್ಲೆಯನ್ನು ಅನ್ಯ ಕೋಮಿನವರು ಮಾಡಿದ್ದಾರೆ ಎಂದು ಆರೋಪಿಸಿ ನವೀನ್ ಸೋಮಯ್ಯ ಮುರುಡೇಶ್ವರ ಠಾಣೆಗೆ ಸುಳ್ಳು ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಘಟನೆ ನಿಜಾಂಶ ಬಯಲಿಗೆಳೆದಿದ್ದಾರೆ. ಭಟ್ಕಳ ಠಾಣೆಯ ಸಿಪಿಐ ಮಹಾಬಲೇಶ್ವರ ನಾಯಕ ತಂಡವು ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ಭಟ್ಕಳದಲ್ಲಿ ಕೋಮು ಸಂಘರ್ಷ ಮೂಡಿಸಿ ಶಾಂತಿ ಕದಡಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.

Comments are closed.