ಕರ್ನಾಟಕ

ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ ವಿಧಿವಶ

Pinterest LinkedIn Tumblr

ಬೆಂಗಳೂರು: ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್​ ಮೂಲಕ ಸವದತ್ತಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಸಿದ್ಧತೆಗಳು ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಸಿಎಂ ಬೊಮ್ಮಾಯಿ ಸಂತಾಪ
ಈ ನಡುವೆ ಆನಂದ ಚಂದ್ರಶೇಖರ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗೆಳೆಯನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ ಎಂದು ಹೇಳಿದ್ದಾರೆ.

 

 

Comments are closed.