ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಹದಿನಾಲ್ಕು ವರ್ಷ ಮುಖ್ಯಮಂತ್ರಿಯಾಗಿ, ಎಂಟೂವರೆ ವರ್ಷಗಳಿಂದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸ ಕಾರ್ಯಗಳು ನನಗೆ ಇಷ್ಟ. ಪ್ರತಿ ನಿತ್ಯ ವೇಳಾಪಟ್ಟಿಯಂತೆ ಅವರು ಬದ್ಧತೆಯಿಂದ ಕೆಲಸ ಮಾಡುತ್ತಾರೆ. ಹೀಗಾಗಿ ನಾನು ಪ್ರಧಾನಿ ಮೋದಿ ಅವರ ಭಕ್ತ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.
Comments are closed.