ಕರಾವಳಿ

ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ಮಕ್ಕಳಿಗೆ ಗಾಯ; ಮೂರು ಶಿಕ್ಷಕಿಯರು, ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

Pinterest LinkedIn Tumblr

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಪ್ರವಾಸದ ಬಸ್ ವೊಂದು ಮಗುಚಿಬಿದ್ದ ಪರಿಣಾಮ 18ಕ್ಕಿಂತಲೂ ಅಧಿಕ ಶಾಲಾ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಬಳಿಯ ಪಾಜೆಗುಡ್ಡೆ ರಾಜ್ಯ ಹೆದ್ದಾರಿ ತಿರುವಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಗಾಯಗೊಂಡವರ ಪೈಕಿ ಮೂವರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ ಗಾಯವಾಗಿದೆ‌ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬಸ್ ವೊಂದರಲ್ಲಿ ಕೊಟ್ಟೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಬಂದಿದ್ದು, ಅಲ್ಲಿ ದೇವರ ದರ್ಶನ ಮುಗಿಸಿ ಮಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Comments are closed.