ತಿರುವನಂತಪುರಂ: ಮಕರ ಸಂಕ್ರಾಂತಿ ದಿನವಾದ ಜ.14 ಶನಿವಾರ ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು.

ಅಯ್ಯಪ್ಪನ ಸ್ತುತಿಸುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು. ಸಂಜೆ 6.50ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ನೆರೆದ ಭಕ್ತರು ಅಯ್ಯಪ್ಪನ ಶರಣು ಕೂಗಿದರು.
ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶನಿವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Comments are closed.