ಕರಾವಳಿ

ಕೆ.ಪಿ.ಸಿ.ಸಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಮಾಜಿ ಸಭಾಪತಿ, ಕಾಂಗ್ರೆಸ್ ಹಿರಿಯ ಮುಖಂಡ ಪ್ರತಾಪಚಂದ್ರ ಶೆಟ್ಟಿ

Pinterest LinkedIn Tumblr

ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ.

ಪಕ್ಷ ಸಂಘಟನೆಗಾಗಿ ಯುವಕರು ಹಾಗೂ ಆಸಕ್ತರಿಗಾಗಿ ಈ ಸ್ಥಾನ ತ್ಯಜಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕೆ. ಪ್ರತಾಪ್ ಚಂದ್ರ ಶೆಟ್ಟಿಯವರ ಹುದ್ದೆಯ ರಾಜೀನಾಮೆ ವದಂತಿ ಬೆನ್ನಲ್ಲೆ ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ್ ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ಕೌತುಕಕ್ಕೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.

Comments are closed.