ಕರಾವಳಿ

ಕೇಂದ್ರ ಸಚಿವ ಅಮಿತ್‌ ಶಾರಿಂದ ಕ್ಯಾಂಪ್ಕೋದ ಸುವರ್ಣ ಮಹೋತ್ಸವಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು, ಫೆ.11 : ಕೇಂದ್ರ ಅಡಿಕೆ ಮತ್ತು ಕುಕ್ಕು ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ದ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ. 11ರ ಶನಿವಾರ ಪುತ್ತೂರಿನ ತೆಂಗಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಚಾಲನೆ ನೀಡಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಹಕಾರ ಸಚಿವರಾದ ಸೋಮಶೇಖರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.

Comments are closed.