ಕರಾವಳಿ

ಕುಂದಾಪುರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು | 8 ಅರ್ಜಿ ಸ್ಥಳದಲ್ಲೇ ವಿಲೇವಾರಿ..!

Pinterest LinkedIn Tumblr

ಕುಂದಾಪುರ: ಲೋಕಾಯುಕ್ತ ಅಧಿಕಾರಿಗಳಿಂದ ಕುಂದಾಪುರ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕುಂದಾಪುರ ತಹಶಿಲ್ದಾರ್ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ‘ಲೋಕಾಯುಕ್ತರಿಂದ ಅಹವಾಲು ಸ್ವೀಕಾರ’ ಕಾರ್ಯಕ್ರಮವು ಮಂಗಳವಾರ ಜರುಗಿತು.

ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ.ಸಿ, ಇನ್ಸ್‌ಪೆಕ್ಟರ್ ಜಯರಾಮ್ ಡಿ. ಗೌಡ ನೇತೃತ್ವದಲ್ಲಿ ನಡೆದ ಅಹವಾಲು ಸ್ವೀಕಾರದಲ್ಲಿ 8 ಅರ್ಜಿಗಳನ್ನು ಸ್ಥಳದಲ್ಲಿ ವಿಲೇವಾರಿ ಮಾಡಲಾಯಿತು. ಪಹಣಿ, ನಿವೇಶನ ವಿಚಾರದಲ್ಲಿ ಹಿರಿಯ ನಾಗರಿಕರು ಲೋಕಾಯುಕ್ತ ಅಧಿಕಾರಿಗಳ ಮುಂದೆ ತಮ್ಮ ಸಮಸ್ಯೆ ಬಗ್ಗೆ ಅವಲತ್ತುಕೊಂಡಿದ್ದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಆದೇಶ ನೀಡಲಾಯಿತು.

ಈ ಸಂದರ್ಭ ಕುಂದಾಪುರ ತಹಶಿಲ್ದಾರ್ ಅನಿತಾ ಲಕ್ಷ್ಮೀ ಎಸ್. ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಕಂದಾಯ ಇಲಾಖೆಯ ಕಚೇರಿಯಲ್ಲಿ ಕಾರ್ಯವಿಳಂಭ, ಗ್ರಾ.ಪಂ ಕಚೇರಿಯಲ್ಲಿನ ಒಂದಷ್ಟು ದೂರುಗಳು, ಸರ್ವೇ ಹಾಗೂ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಯ ವಿಳಂಬ, ಅಕ್ರಮ ಮರಳುಗಾರಿಕೆ ಬಗ್ಗೆ ದೂರುಗಳು ಲೋಕಾಯುಕ್ತ ಕಚೇರಿಗೆ ಸಲ್ಲಿಕೆಯಾಗುತ್ತಿದೆ. ಇದಕ್ಕೆ ಅಗತ್ಯ ಕ್ರಮವಹಿಸುತ್ತಿದ್ದು ನೊಂದವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.