ಬೆಂಗಳೂರು: ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್‌ಪಾಸ್ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಐದು ಬಸ್‌ಗಳನ್ನು ಓಡಿಸಲಾಗುವುದು.ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೆಎಸ್‌ಆರ್‌ಟಿಸಿಯ ಪ್ರೀಮಿಯಂ ಸ್ಲೀಪರ್ ಬಸ್ ಕುರಿತು ಮಾತನಾಡಿ, ಈ ಬಸ್‌ಗಳ ಯಶಸ್ವಿ ಸಂಚಾರದ ಆಧಾರದ ಮೇಲೆ ಮತ್ತಷ್ಟು ಬಸ್ ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಇತರ ಖಾಸಗಿ ಸಾರಿಗೆ ಸಂಸ್ಥೆಗಳೊಂದಿಗೆ ಪೈಪೋಟಿ ನಡೆಸುವ ಮೂಲಕ ಕೆಎಸ್‌ಆರ್‌ಟಿಸಿ ಆದಾಯ ಸಂಗ್ರಹವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Comments are closed.