ಕರ್ನಾಟಕ

ಬಿಜೆಪಿ ಸೇರ್ಪಡೆ ನಿರ್ಧಾರ ಅಂತಿಮವಾಗಿಲ್ಲ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಇಂದು (ಫೆ.22) ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎನ್ನುವ ಸುದ್ದಿಗಳ ನಡುವೆ ‘ಕನ್ನಡಿಗ ವರ್ಲ್ಡ್’ ಗೆ ಕೆಲ ಮಾಹಿತಿ ಲಭಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮುಖಂಡರು ಪಕ್ಷ ಸೇರ್ಪಡೆ ಬಗ್ಗೆ ಮಾತನಾಡಿದ್ದು ನಿಜ. ಆದರೆ ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಅಭಿಮಾನಿಗಳು, ಹಿತೈಷಿಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಮೋದಿಯವರ ನಾಯಕತ್ವ ನೆಚ್ಚಿರುವುದು ನಿಜ ಎಂದಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹಾಗೂ ಮುಖಂಡರ ಸಮ್ಮುಖದಲ್ಲಿ ಅನಂತ್ ನಾಗ್ ಅವರು ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾರೆ ಎಂಬ ಸುದ್ದಿ ವರದಿಯಾಗಿತ್ತು.

ಒಂದಷ್ಟು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಬೆಂಬಲಿಸಿದ್ದರಿಂದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಊಹಾಪೋಹ ಸುದ್ದಿ ಮುನ್ನೆಲೆಗೆ ಬಂದಿತ್ತು.

ಇನ್ನು ಅನಂತ್ ನಾಗ್ ಅವರು ಜೆ.ಎಚ್. ಪಟೇಲ್ ನೇತೃತ್ವದ ಸರಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದವರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಅಲ್ಲದೇ, ಶಾಸಕರಾಗಿ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ.

Comments are closed.